Text copied!
Bibles in Kannada

ಜ್ಞಾನೋ 19:7-14 in Kannada

Help us?

ಜ್ಞಾನೋ 19:7-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
9 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
10 ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
12 ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
13 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14 ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ಜ್ಞಾನೋ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019