Text copied!
Bibles in Kannada

ಜ್ಞಾನೋ 19:8-15 in Kannada

Help us?

ಜ್ಞಾನೋ 19:8-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
9 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
10 ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
11 ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
12 ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
13 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14 ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
ಜ್ಞಾನೋ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019