Text copied!
Bibles in Kannada

ಜ್ಞಾನೋ 1:14-23 in Kannada

Help us?

ಜ್ಞಾನೋ 1:14-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,
15 ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.
16 ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.
17 ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
19 ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
20 ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
21 ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
22 “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
23 ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019