Text copied!
Bibles in Kannada

ಜ್ಞಾನೋ 1:22-28 in Kannada

Help us?

ಜ್ಞಾನೋ 1:22-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
23 ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
24 ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
25 ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
26 ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ
27 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
28 ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019