Text copied!
Bibles in Kannada

ಜ್ಞಾನೋ 1:4-14 in Kannada

Help us?

ಜ್ಞಾನೋ 1:4-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
6 ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
7 ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
8 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
9 ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
10 ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
11 ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.
13 ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.
14 ನಮ್ಮ ಸಂಗಡ ಚೀಟು ಹಾಕು; ನಮ್ಮೆಲ್ಲರ ಹಣದ ಚೀಲ ಒಂದೇ ಆಗಿರಲಿ” ಎಂದು ಹೇಳಿದರೆ,
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019