Text copied!
Bibles in Kannada

ಜ್ಞಾನೋ 20:1-8 in Kannada

Help us?

ಜ್ಞಾನೋ 20:1-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.
2 ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
3 ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.
4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
5 ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
6 ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?
7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019