Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 20

ಜ್ಞಾನೋ 20:15-22

Help us?
Click on verse(s) to share them!
15ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
16ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
17ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
18ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
21ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
22ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.

Read ಜ್ಞಾನೋ 20ಜ್ಞಾನೋ 20
Compare ಜ್ಞಾನೋ 20:15-22ಜ್ಞಾನೋ 20:15-22