Text copied!
Bibles in Kannada

ಜ್ಞಾನೋ 20:7-26 in Kannada

Help us?

ಜ್ಞಾನೋ 20:7-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
8 ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
9 “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
10 ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
11 ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
12 ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.
13 ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
14 ಕೊಳ್ಳುವವನು, “ಚೆನ್ನಾಗಿಲ್ಲ, ಚೆನ್ನಾಗಿಲ್ಲ” ಎಂದು ಹೇಳುತ್ತಾನೆ, ಕೊಂಡುಕೊಂಡು ಹೋಗಿ ಹೆಚ್ಚಳಪಡುತ್ತಾನೆ.
15 ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
16 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.
17 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.
18 ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20 ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
21 ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
22 ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
23 ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.
24 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
25 “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
26 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019