1ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
2ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
3ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
4ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
5ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
6ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.