Text copied!
Bibles in Kannada

ಜ್ಞಾನೋ 21:14-25 in Kannada

Help us?

ಜ್ಞಾನೋ 21:14-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
15 ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
16 ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
17 ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
18 ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
19 ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
20 ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
21 ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
23 ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
24 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
ಜ್ಞಾನೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019