21 ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
23 ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
24 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.