Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 21

ಜ್ಞಾನೋ 21:5-19

Help us?
Click on verse(s) to share them!
5ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
6ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
7ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
8ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
9ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
11ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
12ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
13ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
14ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
15ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
16ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
17ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
18ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
19ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.

Read ಜ್ಞಾನೋ 21ಜ್ಞಾನೋ 21
Compare ಜ್ಞಾನೋ 21:5-19ಜ್ಞಾನೋ 21:5-19