Text copied!
Bibles in Kannada

ಜ್ಞಾನೋ 21:6-12 in Kannada

Help us?

ಜ್ಞಾನೋ 21:6-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
8 ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
11 ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
12 ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
ಜ್ಞಾನೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019