Text copied!
Bibles in Kannada

ಜ್ಞಾನೋ 22:1-10 in Kannada

Help us?

ಜ್ಞಾನೋ 22:1-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
ಜ್ಞಾನೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019