Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 22

ಜ್ಞಾನೋ 22:1-8

Help us?
Click on verse(s) to share them!
1ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
2ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
3ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.

Read ಜ್ಞಾನೋ 22ಜ್ಞಾನೋ 22
Compare ಜ್ಞಾನೋ 22:1-8ಜ್ಞಾನೋ 22:1-8