17ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
18ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
19ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
20ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
21ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
22ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
23ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
24ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.