Text copied!
Bibles in Kannada

ಜ್ಞಾನೋ 22:19-26 in Kannada

Help us?

ಜ್ಞಾನೋ 22:19-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
20 ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
21 ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
23 ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
24 ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
25 ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
26 ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
ಜ್ಞಾನೋ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019