21ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
22ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
23ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
24ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
25ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
26ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
27ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?