1ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ, ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು.
2ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
3ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
4ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
6ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.