Text copied!
Bibles in Kannada

ಜ್ಞಾನೋ 23:10-16 in Kannada

Help us?

ಜ್ಞಾನೋ 23:10-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12 ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
13 ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
14 ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
15 ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
16 ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
ಜ್ಞಾನೋ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019