2ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಗಂಟಲಿಗೆ ಕತ್ತಿಹಾಕಿಕೋ.
3ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
4ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
6ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
7ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
8ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
9ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.