29ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
30ಅವರು ಮಿಶ್ರಮದ್ಯಪಾನಾಸಕ್ತರಾಗಿ, ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.
31ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
32ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.
33ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.