Text copied!
Bibles in Kannada

ಜ್ಞಾನೋ 23:3-12 in Kannada

Help us?

ಜ್ಞಾನೋ 23:3-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.
4 ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
5 ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
6 ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.
7 ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
9 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10 ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11 ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12 ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
ಜ್ಞಾನೋ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019