Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 23

ಜ್ಞಾನೋ 23:7-15

Help us?
Click on verse(s) to share them!
7ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
8ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.
9ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
13ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
14ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
15ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.

Read ಜ್ಞಾನೋ 23ಜ್ಞಾನೋ 23
Compare ಜ್ಞಾನೋ 23:7-15ಜ್ಞಾನೋ 23:7-15