9ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.
10ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.
11ಅವರ ರಕ್ಷಕನು ಬಲಶಾಲಿಯಾಗಿದ್ದಾನೆ, ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.
12ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.
13ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ, ಅವನು ಬೆತ್ತದ ಏಟಿಗೆ ಸಾಯನು.
14ಬೆತ್ತದಿಂದ ಹೊಡೆ, ಅವನ ಆತ್ಮವನ್ನು ಪಾತಾಳಕ್ಕೆ ಬೀಳದಂತೆ ಕಾಪಾಡು.
15ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
16ಹೌದು, ನಿನ್ನ ತುಟಿಗಳು ನೀತಿಯ ನುಡಿಗಳನ್ನಾಡಿದರೆ ನನ್ನ ಅಂತರಾತ್ಮವು ಹಿಗ್ಗುವುದು.
17ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.