Text copied!
Bibles in Kannada

ಜ್ಞಾನೋ 24:25-31 in Kannada

Help us?

ಜ್ಞಾನೋ 24:25-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
26 ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.
27 ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
29 “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
30 ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
31 ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
ಜ್ಞಾನೋ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019