7ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
8ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
9ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.
11ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
12“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
13ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
14ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.