Text copied!
Bibles in Kannada

ಜ್ಞಾನೋ 25:10-23 in Kannada

Help us?

ಜ್ಞಾನೋ 25:10-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
11 ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
12 ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
13 ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
14 ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.
15 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.
16 ಜೇನು ಸಿಕ್ಕಿತೋ? ಮಿತವಾಗಿ ತಿನ್ನು, ಹೊಟ್ಟೆತುಂಬಾ ತಿಂದರೆ ಕಾರಿಬಿಟ್ಟೀಯೇ.
17 ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
18 ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು, ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.
19 ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.
20 ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.
21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
22 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
23 ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
ಜ್ಞಾನೋ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019