Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 25

ಜ್ಞಾನೋ 25:21-27

Help us?
Click on verse(s) to share them!
21ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,
22ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.
23ಉತ್ತರದ ಗಾಳಿ ಮಳೆ ಬರಮಾಡುವುದು, ಚಾಡಿಯ ನಾಲಿಗೆ ಕೋಪದ ಮುಖ ಮಾಡುವುದು.
24ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
25ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
26ದುಷ್ಟರಿಂದ ಸೋತ ಶಿಷ್ಟನು, ಹಾಳು ಬಾವಿ ಮತ್ತು ತುಳಿದಾಡಿದ ಒರತೆ.
27ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.

Read ಜ್ಞಾನೋ 25ಜ್ಞಾನೋ 25
Compare ಜ್ಞಾನೋ 25:21-27ಜ್ಞಾನೋ 25:21-27