5ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.
6ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
7ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
8ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
9ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.