Text copied!
Bibles in Kannada

ಜ್ಞಾನೋ 25:6-11 in Kannada

Help us?

ಜ್ಞಾನೋ 25:6-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
7 ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.
9 ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
11 ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
ಜ್ಞಾನೋ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019