9ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
10ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು.
11ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ.
12ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
13ಸುಗ್ಗೀಕಾಲದಲ್ಲಿ ಹಿಮದ ಶೀತವು ಹೇಗೋ ಕಳುಹಿಸಿದ ಒಡೆಯರಿಗೆ ಆಪ್ತದೂತನು ಹಾಗೆಯೇ ಹಿತ.
14ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.