12ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
13“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
14ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.
15ಸೋಮಾರಿಯು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರ ತರಲಾರದಷ್ಟು ಆಯಾಸಗೊಳ್ಳುತ್ತಾನೆ.
16ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
17ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.
18ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
19ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.
20ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
21ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.