2ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
3ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
4ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
5ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
6ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
7ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
8ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
9ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
10ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
11ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
12ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
13“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.