Text copied!
Bibles in Kannada

ಜ್ಞಾನೋ 26:5-11 in Kannada

Help us?

ಜ್ಞಾನೋ 26:5-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡು, ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
6 ಮೂಢನ ಮೂಲಕ ಮಾತನ್ನು ಹೇಳಿಕಳುಹಿಸುವವನು, ತನ್ನ ಕಾಲುಗಳನ್ನು ತಾನೇ ಕಡಿದುಕೊಂಡು ಕೇಡನ್ನು ಕುಡಿಯುವನು.
7 ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು.
8 ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
9 ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
10 ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
11 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
ಜ್ಞಾನೋ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019