8ಮೂಢನಿಗೆ ಕೊಡುವ ಮಾನವು, ಕವಣೆಯಲ್ಲಿಟ್ಟ ಕಲ್ಲಿನ ಹಾಗೆ.
9ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು, ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲಿನ ಹಾಗೆ.
10ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
11ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.
12ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.
13“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
14ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.