Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 27

ಜ್ಞಾನೋ 27:10-19

Help us?
Click on verse(s) to share them!
10ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
11ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.
12ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
13ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
15ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
16ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.
17ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.
19ನೀರು ಮುಖಕ್ಕೆ ಮುಖವನ್ನು ಹೇಗೆ ಪ್ರತಿಬಿಂಬಿಸುತ್ತದೋ, ಹಾಗೆಯೇ ಮನುಷ್ಯನಿಗೆ ಮನುಷ್ಯನ ಹೃದಯವು ತೋರ್ಪಡಿಸುತ್ತದೆ.

Read ಜ್ಞಾನೋ 27ಜ್ಞಾನೋ 27
Compare ಜ್ಞಾನೋ 27:10-19ಜ್ಞಾನೋ 27:10-19