Text copied!
Bibles in Kannada

ಜ್ಞಾನೋ 27:6-14 in Kannada

Help us?

ಜ್ಞಾನೋ 27:6-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.
7 ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.
8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.
9 ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.
10 ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
11 ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಹೃದಯವನ್ನು ಸಂತೋಷಪಡಿಸು, ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವುದು.
12 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
13 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
ಜ್ಞಾನೋ 27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019