Text copied!
Bibles in Kannada

ಜ್ಞಾನೋ 28:14-21 in Kannada

Help us?

ಜ್ಞಾನೋ 28:14-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
16 ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
17 ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18 ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19 ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20 ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21 ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
ಜ್ಞಾನೋ 28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019