Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 28

ಜ್ಞಾನೋ 28:16-23

Help us?
Click on verse(s) to share them!
16ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
17ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.
18ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.
19ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.
20ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
21ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.
22ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
23ಮುಖಸ್ತುತಿ ಮಾಡುವವನಿಗಿಂತಲೂ, ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.

Read ಜ್ಞಾನೋ 28ಜ್ಞಾನೋ 28
Compare ಜ್ಞಾನೋ 28:16-23ಜ್ಞಾನೋ 28:16-23