Text copied!
Bibles in Kannada

ಜ್ಞಾನೋ 28:4-13 in Kannada

Help us?

ಜ್ಞಾನೋ 28:4-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
5 ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
6 ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.
7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
8 ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.
9 ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
10 ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
11 ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
13 ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.
ಜ್ಞಾನೋ 28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019