Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 29

ಜ್ಞಾನೋ 29:4-14

Help us?
Click on verse(s) to share them!
4ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
5ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.
6ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.
7ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.
8ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.
9ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.
10ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.
11ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
12ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.
13ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.
14ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.

Read ಜ್ಞಾನೋ 29ಜ್ಞಾನೋ 29
Compare ಜ್ಞಾನೋ 29:4-14ಜ್ಞಾನೋ 29:4-14