Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 2

ಜ್ಞಾನೋ 2:1-9

Help us?
Click on verse(s) to share them!
1ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
2ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
3ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
4ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;
5ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
6ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
7ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
8ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
9ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.

Read ಜ್ಞಾನೋ 2ಜ್ಞಾನೋ 2
Compare ಜ್ಞಾನೋ 2:1-9ಜ್ಞಾನೋ 2:1-9