Text copied!
Bibles in Kannada

ಜ್ಞಾನೋ 2:2-8 in Kannada

Help us?

ಜ್ಞಾನೋ 2:2-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
3 ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ.
4 ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;
5 ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
6 ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
7 ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
8 ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
ಜ್ಞಾನೋ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019