Text copied!
Bibles in Kannada

ಜ್ಞಾನೋ 2:5-11 in Kannada

Help us?

ಜ್ಞಾನೋ 2:5-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ.
6 ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
7 ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
8 ನ್ಯಾಯಮಾರ್ಗವನ್ನು ರಕ್ಷಿಸುತ್ತಾ, ತನ್ನ ಭಕ್ತರ ದಾರಿಯನ್ನು ನೋಡಿಕೊಳ್ಳುವನು.
9 ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.
11 ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.
ಜ್ಞಾನೋ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019