Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 30

ಜ್ಞಾನೋ 30:1-6

Help us?
Click on verse(s) to share them!
1ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು.
2ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.
3ನಾನು ಜ್ಞಾನವನ್ನು ಪಡೆದುಕೊಂಡಿಲ್ಲ, ಪರಿಶುದ್ಧನ ವಿಷಯವಾದ ತಿಳಿವಳಿಕೆಯನ್ನು ಹೊಂದಿಲ್ಲ.
4ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.
5ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
6ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.

Read ಜ್ಞಾನೋ 30ಜ್ಞಾನೋ 30
Compare ಜ್ಞಾನೋ 30:1-6ಜ್ಞಾನೋ 30:1-6