Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 30

ಜ್ಞಾನೋ 30:10-27

Help us?
Click on verse(s) to share them!
10ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
11ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.
12ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
13ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.
14ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
15ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು, ಹೌದು, ಸಾಕೆನ್ನದವುಗಳು ನಾಲ್ಕು ಉಂಟು.
16ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.
17ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
18ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
19ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
20ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
21ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
22ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
23ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
24ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
27ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.

Read ಜ್ಞಾನೋ 30ಜ್ಞಾನೋ 30
Compare ಜ್ಞಾನೋ 30:10-27ಜ್ಞಾನೋ 30:10-27