16ಯಾವುವೆಂದರೆ, ಪಾತಾಳ, ಹೆರದ ಗರ್ಭ, ನೀರಿನಿಂದ ತೃಪ್ತಿಪಡದ ಭೂಮಿ, ಸಾಕಾಯಿತೆಂದು ಹೇಳದ ಬೆಂಕಿ, ಇವೇ.
17ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
18ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;
19ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.
20ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.
21ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
22ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
23ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
24ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
27ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
28ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
29ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.