22ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,
23ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ.
24ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.
25ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.
26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
27ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
28ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
29ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
30ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
31ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.