26ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
27ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.
28ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು.
29ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
30ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
31ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ.
32ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.